ಚಾಮರಾಜಪೇಟೆ ಮೈದಾನಕ್ಕೆ ಖಾಕಿ ಭದ್ರತೆ

Webdunia
ಶನಿವಾರ, 13 ಆಗಸ್ಟ್ 2022 (20:07 IST)
ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲು ಕಂದಾಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೈದಾನ ಬಳಿ ಪೊಲೀಸರು ನಿನ್ನೆಯಿಂದಲೇ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮೈದಾನದ ಬಳಕೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಪೊಲೀಸರು ಈಗಾಗಲೇ ಶಾಂತಿ ಸಭೆಗಳನ್ನು ನಡೆಸಿದ್ದಾರೆ.ಆದರೆ, ಕೆಲ ಕಿಡಿಗೇಡಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದಾಗಿ ಗುಪ್ತಚರ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದೇ ಕಾರಣಕ್ಕೆ ಮೈದಾನ ಹಾಗೂ ಸುತ್ತಮುತ್ತ 600ಕ್ಕೂ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಹೆಚ್ಚುವರಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಚಾಮರಾಜಪೇಟೆಯಲ್ಲಿ ನಿನ್ನೆ ಪಥಸಂಚಲನ ನಡೆಸಿದ ಪೊಲೀಸರು, ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ರವಾನಿಸಿದರು. ಚಾಮರಾಜಪೇಟೆಯನ್ನು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿದೆ. KSRP, ನಗರ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಯನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಧ್ವಜಾರೋಹಣ ನೆರವೇರಿಸಲು ಕ್ರಮ ಕೈಗೊಳ್ಳಲಾಗಿದ್ದು, ಆಹ್ವಾನ ಇದ್ದವರಿಗೆ ಮಾತ್ರ ಮೈದಾನದಲ್ಲಿ ಪ್ರವೇಶವಿರಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಫೋಟೋ, ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಮಸೀದಿ ಒಳಗೆ ಎಸ್ಐಆರ್ ನಡೆಸಲಾಗ್ತಿದೆ: ಬಿವೈ ವಿಜಯೇಂದ್ರ ಗಂಭೀರ ಆರೋಪ

ಹೀಗೂ ರಾಜೀನಾಮೆ ಪತ್ರ ಬರೀತಾರಾ.. ಮಹಿಳೆ ಬರೆದ ರಾಜೀನಾಮೆ ಪತ್ರ ನೋಡಿದ್ರೆ ಶಾಕ್ ಆಗ್ತೀರಾ

ಫೋಟೋ ತೆಗೆಯುವಾಗ ಯುವತಿಯ ಸೆರಗು ಜಾರಿತ್ತು... ಯುವಕ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯುವಕರು ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದರೆ ಕೆರಳಿದ ನಾಯಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments