Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೊಚ್ಚ ಹೊಸ ಐಫೋನ್ 14 ಪ್ರೊ-ಮ್ಯಾಕ್ಸ್ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕನೋರ್ವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ. ಸೆ. 29ರಂದು ಬ್ಯಾಂಕಾಕ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ನ ವಾಯು ಗುಪ್ತಚರ ಘಟಕ (AIU) ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ ಐಪೋನ್ ಕಳ್ಳ ಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬಂಧಿತ ಆರೋಪಿಯಿಂದ 16 ಹೊಚ್ಚ ಹೊಸ ಐಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ. ಭಾರತದಲ್ಲಿ ಐಫೋನ್ 14 ಪ್ರೊ ಮ್ಯಾಕ್ಸ್ಗೆ 1 ಲಕ್ಷದ 50 ಸಾವಿರ ರೂ. ಬೆಲೆ ಇದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.