Publish Date: Sat, 02 Jul 2022 (11:38 IST)
Updated Date: Sat, 02 Jul 2022 (11:31 IST)
ಕಲಬುರಗಿ : ಜಿಲ್ಲೆಯಾದ್ಯಂತ ಜುಲೈ 10 ರಂದು ಶಾಂತಿಯುತ ಬಕ್ರೀದ್ ಹಬ್ಬ ಆಚರಣೆಗೆ ಕರೆ ನೀಡಲಾಗಿದೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಯಶವಂತ ವಿ. ಗುರುಕರ್ ಅಧ್ಯಕ್ಷತೆಯಲ್ಲಿ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಶಾಂತಿಯುತ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಬಕ್ರೀದ್ ಹಬ್ಬ ದಿನದಂದು ಯಾವುದೇ ಮೆರವಣಿಗೆ ನಡೆಸುವಂತಿಲ್ಲ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕಾರಣ ಗೋಹತ್ಯೆ ಮಾಡುವಂತಿಲ್ಲ.
ಜೊತೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಿಲ್ಲ ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಣೆ ಮಾಡುವಂತೆ ಸೂಚನೆ ಜಿಲ್ಲಾಧಿಕಾರಿ ನೀಡಿದ್ದಾರೆ.
Ramya kosira
Publish Date: Sat, 02 Jul 2022 (11:38 IST)
Updated Date: Sat, 02 Jul 2022 (11:31 IST)