ದಲಿತ ಪ್ರತಿಭಟನಾಕಾರರನ್ನು ನಾಯಿಗಳಿಗೆ ಹೋಲಿಸಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕ್ರತಿ ಇಲ್ಲದವರ ವಿರುದ್ಧ ಮಾತನಾಡುವುದು ಸರಿಯಲ್ಲ. ಇಂತಹ ಸಚಿವರನ್ನು ಸಂಪುಟದಲ್ಲಿರಿಸಿಕೊಂಡ ಪ್ರಧಾನಿ ಮೋದಿ ಸಚಿವರ ಹೇಳಿಕೆಯ ಹೊಣೆ ಹೊರಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ. ಪ್ರತಿಭಟನೆ ಮಾಡುವುದು ಬಿಟ್ಟು ಇನ್ನೇನು ಮಾಡಬೇಕು. ಪ್ರತಿಭಟನೆ ಮಾಡಿದವರ ಬಗ್ಗೆ ಇಂತಹ ಅವಹೇಳನಾಕಾರಿ ಹೇಳಿಕೆ ನೀಡುವುದು ಯಾವುದೇ ರಾಜಕಾರಣಿಗೂ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.
ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೆ ನೀಡಿ ದಲಿತರ ಕೆಂಗೆಣ್ಣಿಗೆ ಗುರಿಯಾಗಿದ್ದ ಸಚಿವ ಹೆಗಡೆ ಇದೀಗ ದಲಿತರನ್ನೇ ನಾಯಿಗಳಿಗೆ ಹೋಲಿಸುವ ಮಟ್ಟಕ್ಕೆ ಹೋಗಿದ್ದಾರೆ. ಇದೇ ದಲಿತರು ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.