Publish Date: Tue, 02 Jun 2020 (19:57 IST)
Updated Date: Tue, 02 Jun 2020 (20:00 IST)
ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್, ಬಿಜೆಪಿಯಿಂದ ಘಟಾನುಘಟಿ ನಾಯಕರು ಅಖಾಡಕ್ಕೆ ಧುಮಕಲಿದ್ದಾರೆ.
ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಕಾಂಗ್ರೆಸ್ ನಿಂದ ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ಪರ್ಧೆ ಮಾಡೋದು ಪಕ್ಕಾ ಆದಂತಿದೆ.
ಇನ್ನು ಬಿಜೆಪಿಯಿಂದ ಪ್ರಭಾಕರ ಕೋರೆ ಮತ್ತೊಮ್ಮೆ ಚುನಾವಣೆ ಎದುರಿಸಲಿದ್ದು, ಇನ್ನೊಂದು ಸ್ಥಾನಕ್ಕೆ ಪ್ರಬಲ ಪೈಪೋಟಿ ಕಂಡು ಬರುತ್ತಿದ್ದು, ಅಭ್ಯರ್ಥಿಗಳ ಹೆಸರು ಪಕ್ಕಾ ಮಾಡುವುದರಲ್ಲಿ ಬಿಜೆಪಿ ಹೈಕಮಾಂಡ್ ತೊಡಗಿದೆ.