Publish Date: Mon, 17 Oct 2022 (19:39 IST)
Updated Date: Mon, 17 Oct 2022 (19:41 IST)
ಸರ ಕೀಳಲು ಬಂದವನು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಅಕ್ಕೆಬಾಳು ಗ್ರಾಮದಲ್ಲಿ ನಡೆದಿದೆ. ಸರ ಕೀಳಲು ಯತ್ನಿಸಿದ ನೂರುಲ್ಲಾಗೆ ಧರ್ಮದೇಟು ಬಿದ್ದಿದ್ದು, ಸರಗಳ್ಳನನ್ನ ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಮಹಿಳೆಯ ಕತ್ತಿಗೆ ಕೈ ಹಾಕಿ ಸರ ಕೀಳಲು ಯತ್ನಿಸಿದ್ದಾನೆ. ಬಳಿಕ ಅಲ್ಲೆ ಇದ್ದ ಸ್ಥಳೀಯರ ಕೈಯಲ್ಲಿ ತಗಲಾಕಿ ಕೊಂಡ ಆರೋಪಿಯನ್ನ ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿದ್ದಾನೆ. ಸ್ಥಳೀಯರು ಆರೋಪಿಯನ್ನ ಹಿಡಿದು ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಆರ್ ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.