545 ಪಿಎಸ್ ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬಂಧಿಸಿದ್ದಾರೆ. ಪಿಎಸ್ ಐ ನೇಮಕಾತಿ ಪ್ರಕರಣದಲ್ಲಿ ಕಿಂಗ್ ಪಿನ್ ಎನ್ನಲಾಗುತ್ತಿರುವ ರುದ್ರಗೌಡ ಪಾಟೀಲ್ ತಲೆಮರೆಸಿಕೊಂಡಿದ್ದ. ರುದ್ರಗೌಡಗೆ ತೀವ್ರ ಶೋಧ ಕಾರ್ಯ ನಡೆಸಿದ ಸಿಐಡಿ ಇಂದು ಮಹಾರಾಷ್ಟ್ರದಲ್ಲಿ ಬಂಧಿಸಿದೆ. ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ರುದ್ರಗೌಡ ಪಾಟೀಲ್ ಸೋದರ, ಅಫಜಲ್ ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್ನನ್ನು ಸಿಐಡಿ ಈಗಾಗಲೇ ಬಂಧಿಸಿದೆ.