ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ ಬೆನ್ನಲ್ಲೇ ಅವರ ರಾಜೀನಾಮೆಗೆ ಬಿಜೆಪಿ ಗಡುವು ವಿಧಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೊಮ್ಮೆ ರಾಜೀನಾಮೆ ಸಲ್ಲಿಸಿದ್ದ ಸಚಿವ ಜಾರ್ಜ್ ಸಿಐಡಿ ತನಿಖಾ ತಂಡ ಕ್ಲೀನ್ ಚಿಟ್ ನೀಡಿದ ಹಿನ್ನಲೆಯಲ್ಲಿ ಮತ್ತೆ ಸಚಿವ ಸಂಪುಟಕ್ಕೆ ಮರಳಿದ್ದರು.
ಇದೀಗ ಸಿಬಿಐ ಎಫ್ ಐಆರ್ ವಿಧಿಸಿರುವುದರಿಂದ ಮತ್ತೆ ಬಿಜೆಪಿ ಜಾರ್ಜ್ ವಿರುದ್ಧ ಹೋರಾಟಕ್ಕೆ ತೀರ್ಮಾನಿಸಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಸಚಿವ ಜಾರ್ಜ್ ಶುಕ್ರವಾರದೊಳಗೆ ರಾಜೀನಾಮೆ ನೀಡದಿದ್ದರೆ ಉಗ್ರ ಹೋರಾಟ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ. ಅವರಾಗಿಯೇ ರಾಜೀನಾಮೆ ನೀಡದಿದ್ದರೆ ಸಿಎಂ ಸಿದ್ದರಾಮಯ್ಯ ಜಾರ್ಜ್ ಅವರನ್ನು ವಜಾಗೊಳಿಸಬೇಕು ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ