ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ವಿಷಯ ಖಂಡಿಸಿ ಹಾಗೂ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಕೊಡಗು ಬಂದ್ ಗೆ ಕರೆ ನೀಡಲಾಗಿತ್ತು.
ಮದ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಕೊಡಗು ಬಂದ್ ನಡೆಯಿತು.
ಒಂದು ಗಂಟೆಯ ಕಾಲ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೊಡಗು ಬಂದ್ ಗೆ ಹಿಂದೂ ಸುರಕ್ಷಾ ವೇದಿಕೆ ಪ್ರಮುಖರು ಕರೆ ನೀಡಿದ್ದರು.
ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್, ನೂರಾರು ಪೊಲೀಸರ ನಿಯೋಜನೆ ಮಾಡಲಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ಗಡಿಯಾರ ಗೋಪುರದ ಬಳಿ ಪ್ರತಿಭಟನೆ ನಡೆಸಲಾಯಿತು. ಪತ್ರಕರ್ತ ಸಂತೋಷ ತಮ್ಮಯ್ಯ ನನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಲಾಯಿತು.