ದೇವಸ್ಥಾನ ಮುಂಭಾಗ ಕೋಲಾರ ನಗರಸಭೆ ಸದಸ್ಯನ ಬರ್ಬರ ಹತ್ಯೆ

Webdunia
ಮಂಗಳವಾರ, 7 ಜೂನ್ 2022 (15:03 IST)
ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿರುವ ಗಂಗಮ್ಮ ದೇವಾಲಯದ ಮುಂಭಾಗ ಮನೆ ಸಮೀಪ ನಗರಸಭೆ ಸದಸ್ಯನೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರನ್ನು ಕೊಲೆ ಮಾಡಲಾಗಿದ್ದು, ಜಗನ್ ಅವರನ್ನು ಸಂಚು ಹಾಕಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆ ಎದುರು ಮಾರಾಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಬಲಗೈ ಬಂಟ ಮತ್ತು ಆಪ್ತನಾಗಿದ್ದ ಇವರನ್ನು ಮುಂಜಾನೆ ನಾಲ್ಕು ಜನರ ತಂಡ ಲಾಂಗು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಇತ್ತೀಚೆಗೆ ಹಾಸನದಲ್ಲಿ ನಡೆದ ಹತ್ಯೆ ನಂತರ ರಾಜ್ಯದಲ್ಲಿ ನಡೆದ ಎರಡನೇ ನಗರಸಭಾ ಸದಸ್ಯನ ಹತ್ಯೆ ಘಟನೆ ಇದಾಗಿದೆ.
ಸ್ಥಳಕ್ಕೆ ಮುಳಬಾಗಿಲು ಡಿವೈಎಸ್‍ಪಿ ಗೌರಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments