Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಭೆ: ಉಪಚುನಾವಣೆ ರಣತಂತ್ರ

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಭೆ: ಉಪಚುನಾವಣೆ ರಣತಂತ್ರ
ಬೆಂಗಳೂರು , ಸೋಮವಾರ, 20 ಮಾರ್ಚ್ 2017 (19:08 IST)
ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಉಪಚುನಾವಣೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಸಭೆಯಲ್ಲಿ ಕಾಗೋಡು ತಿಮ್ಮಪ್ಪ, ರಮೇಶ್ ಕುಮಾರ್, ತನ್ವೀರ್ ಸೇಠ್, ಪ್ರಿಯಾಂಕಾ ಖರ್ಗೆ ಸೇರಿದಂತೆ ಸಚಿವರು ಶಾಸಕರು ಉಪಸ್ಥಿತರಿದ್ದಾರೆ.
 
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಗೆಲ್ಲಲು ಯಾವ ರೀತಿ ರಣತಂತ್ರ ರೂಪಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
 
ಎರಡೂ ಕ್ಷೇತ್ರಗಳ ಉಪಚುನಾವಣೆಯ ವಿಧಾನಸಭಾ ಕ್ಷೇತ್ರಗಳ ಪ್ರತಿಯೊಂದು ಜಿಪಂ ವ್ಯಾಪ್ತಿಯಲ್ಲಿ ಸಚಿವರಿಗೆ ಉಸ್ತುವಾರಿ ವಹಿಸಲಾಗುತ್ತಿದೆ ಎರಡೂ ಕ್ಷೇತ್ರಗಳಿಗೆ ಮುಖ್ಯ ಉಸ್ತುವಾರಿ ಸಚಿವರನ್ನು ನೇಮಕ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಣಿ ಕಾಲೇಜು ವಿದ್ಯಾರ್ಥಿನಿಯರಿಗೆ ಸೈಕೋ ಕಾಟ