ಕಾವೇರಿ ನದಿಯಿಂದ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಕೆಪಿಎನ್ ಟ್ರಾವೆಲ್ಸ್ಗೆ ಸೇರಿದ್ದ ಬಸ್ಗಳಿಗೆ ಬೆಂಕಿ ಹಚ್ಚಿದ 7 ಜನರನ್ನು ಬಂಧಿಸುವಲ್ಲಿ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾವೇರಿ ವಿವಾದದ ಗಲಾಟೆ ಸಂದರ್ಭದಲ್ಲಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಕೆಪಿಎನ್ ಡಿಪೋಗೆ ನುಗ್ಗಿ 7 ಜನರು ಸುಮಾರು 35 ಕ್ಕೂ ಹೆಚ್ಚು ಬಸ್ಗಳಿಗೆ ಬೆಂಕಿ ಹಚ್ಚಿದ್ದರು. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಂಧಿತರನ್ನು ಸತೀಶ್, ರಕ್ಷಿತ್, ಪ್ರಕಾಶ್, ಕೆಂಪೆಗೌಡ, ಲೋಕೇಶ್ ಹಾಗೂ ಚಂದನ್ ಬಂಧಿತರಾಗಿದ್ದು, ಇವರೆಲ್ಲರೂ ಡಿಸೋಜ್ ನಗರ ಹಾಗೂ ವೀರಭದ್ರ ನಗರ ನಿವಾಸಿಗಳಾಗಿದ್ದು, ಬಂಧಿತರು ಪೀಣ್ಯ ಗಾರ್ಮೆಂಟ್ಸ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ