ಯುವತಿಯರೊಂದಿಗೆ ಅನುಚಿತ ವರ್ತನೆ ತೋರುತ್ತಿದ್ದ ಕಾಮುಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಪುರಂ ಸರಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ಗಾಗಿ ಬರುವ ಮಹಿಳೆಯರ ನಗ್ನ ಚಿತ್ರಗಳನ್ನು ತೆಗೆದು ವಿಕೃತ ಸಂತೋಷ ಅನುಭವಿಸುತ್ತಿದ್ದ ಕಾಮು ಅಟೆಂಡರ್ ರಘು ಪೊಲೀಸರ ಅತಿಥಿಯಾಗಿದ್ದಾನೆ.
ಮಹಿಳೆಯೊಬ್ಬಳು ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ ಆಕೆಯ ನಗ್ನ ಚಿತ್ರವನ್ನು ತೆಗೆಯಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಮಹಿಳೆಗೆ ಎಚ್ಚರಗೊಂಡು ಅಟೆಂಡರ್ ರಘುವಿನ ಮೈ ಚಳಿ ಬಿಡಿಸಿದ್ದಾಳೆ..
ಹಿಂದೆ ಅನೇಕ ಯುವತಿಯರ ನಗ್ನ ಚಿತ್ರಗಳನ್ನು ತೆಗೆದಿರುವ ಬಗ್ಗೆ ಪೊಲೀಸರ ವಿಚಾರಣೆಯಲ್ಲಿ ಅಟೆಂಡರ್ ರಘು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.
ನೊಂದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ರಘುವಿನ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.