ಸಿಎಂ ವಿರುದ್ಧ ಕೀಳು ಭಾಷೆ ಬಳಕೆ: ಸಚಿವ ಹೆಗಡೆ ಸಂಸ್ಕ್ರತಿ ಎಂದ ಸಚಿವ ಭೈರೇಗೌಡ

Webdunia
ಶನಿವಾರ, 18 ನವೆಂಬರ್ 2017 (12:12 IST)
ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಕೀಳು ಭಾಷೆ ಬಳಸಿ ಸಿಎಂ ಸಿದ್ದರಾಮಯ್ಯರನ್ನು ನಿಂದಿಸಿರುವುದು ಅವರ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ಸಚಿವ ಕೃಷ್ಣ ಭೈರೆಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸಾಂವಿಧಾನಿಕ ಕೇಂದ್ರ ಸಚಿವ ಸ್ಥಾನದಲ್ಲಿರುವವರು ರಾಜ್ಯದ ಮುಖ್ಯಮಂತ್ರಿಯೊಬ್ಬರನ್ನು ಅತ್ಯಂತ ಕೀಳು ಭಾಷೆಯಲ್ಲಿ ನಿಂದಿಸಿರುವುದು ನಾಚಿಕೆಗೇಡಿತನದ ಸಂಗತಿ. ಬಿಜೆಪಿಯ ಸಂಸ್ಕ್ರತಿಯ ಅತಂಹ ಹೀನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಬೇಕಾಗಿದೆ. ಇಂತಹ ವ್ಯಕ್ತಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕೇಂದ್ರ ಸಚಿವರನ್ನಾಗಿ ಆಯ್ಕೆ ಮಾಡಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಕಿಡಿಕಾರಿದ್ದಾರೆ.
 
ಬಿಜೆಪಿ ನಾಯಕರು ಸಂಸ್ಕ್ರತಿಯನ್ನೇ ಮರೆತಿದ್ದಾರೆ. ಅಸಂಸ್ಕ್ರತ ನಡುವಳಿಕೆ ಹೆಚ್ಚಿಸಲೆಂದೇ ಹೆಗಡೆಗೆ ಕೇಂದ್ರ ಸಚಿವ ಸ್ಥಾನ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ವ್ಯಂಗ್ಯವಾಡಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮಾಧ್ಯಮಗಳಿಗೆ ನಿರ್ಬಂಧ ಪ್ರಜಾಪ್ರಭುತ್ವ ವಿರೋಧಿ ನಡೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments