Publish Date: Sat, 14 Jul 2018 (11:51 IST)
Updated Date: Sat, 14 Jul 2018 (11:53 IST)
ಶಿವಮೊಗ್ಗ: ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕಡಿತ ಮಾಡಿರುವ ಅನ್ನಭಾಗ್ಯ ಅಕ್ಕಿ ಹೆಚ್ಚು ಮಾಡಿಸಲಿ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ರೈತರ ಭರವಸೆ ಸುಳ್ಳು ಮಾಡಿದೆ ಎಂದು ಅವರು ಹೇಳಿದ್ದಾರೆ.
ಅಷ್ಟೇ ಅಲ್ಲ, ಕೊಟ್ಟಿರುವ ಭರವಸೆ ಈಡೇರಿಸದೇ ಇದ್ದರೆ ಬಿಎಸ್ ವೈ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.