ಗಡಿ ನಾಡು ಹಾಗೂ ಕುಂದಾನಗರಿ ಖ್ಯಾತಿಯ ಜಿಲ್ಲೆಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ರು.
ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಸ್ಥಳಗಳಿಗೆ ಭೇಟಿ ನೀಡಿದ್ರು. ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆಯ ಬಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ನದಿಪಾತ್ರದಲ್ಲಿ ಬೆಳೆಹಾನಿ ಪರಿಶೀಲಿಸಿದ್ರು.
ಯಾವುದೇ ದಾಖಲಾತಿಗಳನ್ನು ಕೇಳದೇ ಪ್ರವಾಹ ಬಾಧಿತ ಎಲ್ಲ ಕುಟುಂಬಗಳಿಗೂ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ.
ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಹದಿನೈದು ದಿನಗಳಲ್ಲಿ ಸಂಪೂರ್ಣ ವರದಿ ನೀಡಲು ಜಿಲ್ಲಾ ಪಂಚಾಯತ ಸಿಇಓ ಗಳಿಗೆ ಸೂಚನೆ ನೀಡಲಾಗಿದೆ ಎಂದ್ರು.