ಬೆಂಗಳೂರು: ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪನವರನ್ನು ಪಕ್ಷದಿಂದಲೇ ಉಚ್ಛಾಟಿಸಲು ಚಿಂತನೆ ನಡೆದಿದೆ.
ಕೆಎಸ್ ಈಶ್ವರಪ್ಪ ಬಿಜೆಪಿ ಹೈಕಮಾಂಡ್ ಮಾತನ್ನೂ ಧಿಕ್ಕರಿಸಿ ಶಿವಮೊಗ್ಗದಿಂದ ಸ್ಪರ್ಧಿಸಲು ಈಶ್ವರಪ್ಪ ನಿನ್ನೆ ನಾಮಪತ್ರ ಸಲ್ಲಿಸಿದರು. ಇದು ಈಗ ಬಿಜೆಪಿ ನಾಯಕರ ಚಿಂತೆಗೆ ಕಾರಣವಾಗಿದೆ. ಈಶ್ವರಪ್ಪ ನಾಮಪತ್ರ ಹಿಂದೆ ಪಡೆಯದೇ ಇದ್ದರೆ ಬಿಜೆಪಿ ಮತ ವಿಭಜನೆಯಿಂದ ತೊಂದರೆಯಾಗಲಿದೆ.
ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಈಶ್ವರಪ್ಪ ಬಗ್ಗೆ ಹೈಕಮಾಂಡ್ ಗೆ ವರದಿ ನೀಡುವ ಸಾಧ‍್ಯತೆಯಿದೆ. ನಾಮಪತ್ರ ಹಿಂಪಡೆಯಲು ಈಶ‍್ವರಪ್ಪ ಮನ ಒಲಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈಶ್ವರಪ್ಪ ನಮ್ಮ ಹಿರಿಯ ನಾಯಕರು. ಅವರ ಜೊತೆ ಮಾತನಾಡುತ್ತೇವೆ ಎಂದಿದ್ದಾರೆ.
ಹೀಗಿದ್ದರೂ ಒಂದು ವೇಳೆ ಈಶ್ವರಪ್ಪ ತಮ್ಮ ನಿರ್ಧಾರದಿಂದ ಹಿಂದೆ ಸರಿಯದೇ ಇದ್ದರೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆಯೂ ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಏಪ್ರಿಲ್ 19 ರವರೆಗೆ ಕಾಧು ನೋಡಲು ತೀರ್ಮಾನಿಸಿದ್ದಾರೆ.