Publish Date: Fri, 03 Feb 2023 (17:04 IST)
Updated Date: Fri, 03 Feb 2023 (17:10 IST)
ಆರ್.ಟಿ ನಗರದಲ್ಲಿರುವ ಸಿಎಂ ಬೊಮ್ಮಾಯಿ ಅವರ ಖಾಸಗಿ ನಿವಾಸಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದರು. ಈ ವೇಳೆ ಮುಖ್ಯಮಂತ್ರಿಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಶಿವಮೊಗ್ಗ ಪ್ರವಾಸಕ್ಕೆ ಸಿಎಂ ಆಗಮಿಸುತ್ತಿರುವ ಕುರಿತು ಮಾತುಕತೆ ನಡೆಯಿತು. ಇದರ ಜೊತೆಯಲ್ಲಿಯೇ ಸಚಿವ ಸಂಪುಟ ವಿಸ್ತರಣೆ ವಿಷಯದ ಕುರಿತು ಪ್ರಸ್ತಾಪವಾಯಿತು. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ನಿರ್ಧಾರವಾಗಲಿದೆ ನಿಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆಗೆ ಈಶ್ವರಪ್ಪ ಅಸಹನೆಗೊಂಡರು. ಈ ವೇಳೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ ಇನ್ಮುಂದೆ ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟವಾಗಿ ಸಿಎಂ ಗೆ ತಿಳಿಸಿದ್ದೇನೆ. ಇನ್ನೂ ರಾಜಕಾರಣದಲ್ಲಿ ಏನೇನು ಆಗುತ್ತದೆ ಅಂತಾ ಯಾರಿಗೂ ಗೊತ್ತಾಗಲ್ಲ, ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಳ್ಳುತ್ತಾನೆ ಅಂತಾ ಕನಸು ಬಿದ್ದಿತ್ತಾ? ಅವರು ಮಲಗಿದ್ದು ಒಂದು ಕಡೆ ಪತ್ರ ಸಿಕ್ಕಿದ್ದು ಮತ್ತೊಂದು ಕಡೆ ಆದರೂ ಈ ಪ್ರಕರಣದಲ್ಲಿ ನನ್ನ ಮೇಲೆ ಆರೋಪ ಬಂತು, ನಂತರ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆಯನ್ನೂ ನೀಡಬೇಕಾಯಿತು ಎಂದರು.