ಕರ್ನಾಟಕದ ಪಾರಂಪಾರಿಕ ಉತ್ಪನ್ನವಾದ ಕೆ.ಎಸ್.ಐ.ಸಿ. ಮೈಸೂರ ಸೀಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಡಿಸೆಂಬರ್ 25 ರಿಂದ 28ರವರೆಗೆ ಆಯೋಜಿಸಲಾಗಿದೆ.
ಪ್ರತಿದಿನ ಬೆಳಗಿನ 10 ರಿಂದ ರಾತ್ರಿ 8 ಗಂಟೆಯವರೆಗೆ ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದ ಬಳಿಯಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದ (ಶ್ರೀ ಬಾಪೂಗೌಡ ದರ್ಶನಾಪುರ ರಂಗಮಂದಿರ) ದಲ್ಲಿ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಏರ್ಪಡಿಸಲಾಗಿದೆ.
ಸಂಪ್ರದಾಯಿಕ ಮೈಸೂರು ಸಿಲ್ಕ್ ಸೀರೆಗಳಲ್ಲದೇ ಕೆ.ಎಸ್.ಐ.ಸಿ.ಯ ಈಗ ನಾಜೂಕಾದ ವಿನ್ಯಾಸದ ಸಂಗ್ರಹಿತ “ಕ್ರೇಪ್ ಡಿ ಚೈನ್” ಸೀರೆಗಳನ್ನು ಹಾಗೂ ಜಾರ್ಜೆಟ್ ಮತ್ತು ಸಾದಾ ಮುದ್ರಿತ ಸೀರೆಗಳನ್ನು, ಟೈ, ಸ್ಕಾರ್ಪ್ ಇತ್ಯಾದಿ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ. ಇದಲ್ಲದೇ ನವನವೀನ “ವಿವಾಹ ಸಂಗ್ರಹ” ಸೀರೆಗಳನ್ನು ಪರಿಚಯಿಸಲಾಗಿದೆ ಹಾಗೂ ಕೆ.ಎಸ್.ಐ.ಸಿ.ಯು ತನ್ನ ಉತ್ಪನ್ನಗಳ ಮೇಲೆ ಶೇಕಡಾ 25 ರವರೆಗೆ ವಿಶೇಷ ರಿಯಾಯಿತಿಯನ್ನು ನೀಡುತ್ತಿದೆ.