ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಬಸ್‌ನಿಂದಾಗಿ ಅಪ್ಪ ಮಗಳು ಸೇರಿದಂತೆ ಮೂವರು ಬಲಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಇಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಚಲಿಸುತ್ತಿರುವ ಸಂದರ್ಭದಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ನಿಂತಿದ್ದ ಅಪ್ಪ ಮತ್ತು ಮಗಳ ಮೇಲೆ ಹರಿದಿದ್ದರಿಂದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮತ್ತೊಬ್ಬ ಯುವಕ ಕೂಡಾ ಬಸ್ ಅಪಘಾತದಲ್ಲಿ ಗಂಬೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಹೂವಿನಹಡಗಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಬಸ್ ಚಾಲಕ ಪರಾರಿಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.