Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚೆನ್ನೈ: ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಐರಾವತ ಬಸ್ ನಲ್ಲಿ ಚೆನ್ನೈ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಚೆನ್ನೈ ಗೆ ಸಮೀಪ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಸ್ ನಲ್ಲಿ ಸುಮಾರು 44 ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಅಪಾಯವಾಗಿಲ್ಲ. ಆದರೆ ಲಗೇಜ್ ಗಳು ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ.
ತಕ್ಷಣ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಡ್ರೈವರ್ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹೊರಗೆ ಕಳುಹಿಸಿದ ಕಾರಣ ದೊಡ್ಡ ಅಪಾಯ ತಪ್ಪಿದೆ.
ಇದನ್ನೂ ಓದಿ… ಶೂಟಿಂಗ್ ನಲ್ಲಿ ಗಾಯ ಮಾಡಿಕೊಂಡ ಬಿಗ್ ಬಿ ಅಮಿತಾಭ್ ಬಚ್ಚನ್
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ