ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸಲು ಸಿದ್ಧವಾಗಿದೆ. ಡಿಸೆಂಬರ್ ವೇಳೆಗೆ ವಿದ್ಯುತ್ ಚಾಲಿತ ಬಸ್‌ಗಳು ಬೆಂಗಳೂರಿನಿಂದ ಸಂಚಾರ ನಡೆಸಲಿವೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗಾಗಲೇ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ನಡೆಸುತ್ತಿದೆ.
ಕೆಎಸ್‌ಆರ್‌ಟಿಸಿ ಬೆಂಗಳೂರಿನಿಂದ ವಿವಿಧ ನಗರಕ್ಕೆ ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲು ಯೋಜನೆ ಸಿದ್ಧಪಡಿಸಿದೆ.
ಕರ್ನಾಟಕಕ್ಕೆ ಬರುತ್ತಾ ಓಲಾ ಎಲೆಕ್ಟ್ರಿಕ್ ಕಾರು ತಯಾರಿಕಾ ಘಟಕ?
50 ಎಲೆಕ್ಟ್ರಿಕ್ ಬಸ್‌ಗಳನ್ನು ಹೈದರಾಬಾದ್ ಮೂಲದ ಕಂಪನಿ ಕೆಎಸ್‌ಆರ್‌ಟಿಸಿಗೆ ಪೂರೈಕೆ ಮಾಡಲಿದೆ. ಡಿಸೆಂಬರ್ ವೇಳೆಗೆ 25 ಎಲೆಕ್ಟ್ರಿಕ್ ಬಸ್ ಕೆಎಸ್‌ಆರ್‌ಟಿಸಿಗೆ ಸಿಗುವ ನಿರೀಕ್ಷೆ ಇದೆ. ಉಳಿದ ಬಸ್‌ಗಳು 2023ರ ಮಾರ್ಚ್‌ಗೆ ಬಂದು ಸೇರಲಿವೆ.
ಇಂಧನ ಕೊರತೆ: ಬಿಎಂಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ- ಅಧಿಕಾರಿಗಳ ಸ್ಪಷ್ಟನೆ
ಬೆಂಗಳೂರಿನಿಂದ ಯಾವ ಮಾರ್ಗದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಬೇಕು? ಎಂದು ಕೆಎಸ್‌ಆರ್‌ಟಿಸಿ ಈಗಾಗಲೇ ನೀಲನಕ್ಷೆ ತಯಾರು ಮಾಡಿದೆ. ಮೊದಲು ಬೆಂಗಳೂರು-ಮೈಸೂರು ನಡುವೆ ಬಸ್‌ಗಳು ಸಂಚಾರ ನಡೆಸಲಿವೆ. ಈ ವರ್ಷದ ಡಿಸೆಂಬರ್‌ನಲ್ಲಿಯೇ ಉಭಯ ನಗರಗಳ ನಡುವೆ ಬಸ್ ಸಂಚಾರ ನಡೆಸುವ ನಿರೀಕ್ಷೆ ಇದೆ.