ಪ್ರಯಾಣಿಕರ ಅನುಕೂಲಕ್ಕಾಗಿ ಮಹಾಶಿವರಾತ್ರಿ ಪ್ರಯುಕ್ತ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಜಿಲ್ಲೆಗಳಿಗೆ ಹೆಚ್ಚುವರಿ 450 ಕೆಎಸ್ಆರ್‌ಟಿಸಿ ಬಸ್‌ಗಳನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥೆ ಮಾಡಿದೆ. ಇದೇ ತಿಂಗಳ 23 ಮತ್ತು 24ರಂದು ಬಸ್ಸುಗಳು ಬೆಂಗಳೂರು ಮತ್ತು ಇತರೆ ನಗರಗಳಿಂದ ಹೊರಡಲಿದ್ದು 26ರಂದು ಬೆಂಗಳೂರಿಗೆ ಹಿಂತಿರುಗಲಿವೆ.
ಈಶಾನ್ಯ ಮತ್ತು ವಾಯುವ್ಯ ಪ್ರದೇಶಗಳಿಗೆ ಹೊರಡುವ ಬಸ್ಸುಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡಲಿವೆ. ಕೆಂಪೇಗೌಡ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ತಿರುಪತಿ, ಬೀದರ್, ಪಾವಗಡ, ಹೊಸದುರ್ಗಕ್ಕೆ ಬಸ್ಸುಗಳು ಸಂಚಾರ ಮಾಡಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್ಸುಗಳು ಸಂಚರಿಸಲಿವೆ. ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು, ಆಂಧ್ರಪ್ರದೇಶದ ಕಡೆಯ ಬಸ್ಸುಗಳು ಸಂಚಾರ ನಡೆಸಲಿವೆ ಎಂದು ಕೆಎಸ್ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.