ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯ ಶುಕ್ರವಾರ ನೆರವೇರಿದೆ.
ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ನುಡಿದಿದ್ದಾರೆ.
ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಿರುವ, ಸಾಮರಸ್ಯವಿರುವ, ಭಾರತದಲ್ಲಿಯೇ ಅತ್ಯಂತ ಶ್ರೇಷ್ಠ ರಾಜ್ಯವಾಗಬೇಕು.