ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಅಂತ ಹಾರೈಸ್ತೇನೆ. ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ಚದ ವಿಕೃತಿಯಾಗಿದೆ. ರಾಜಕಾರಣಿಗಳು ರೆಸಾರ್ಟ್, ಆಪರೇಷನ್ ನಲ್ಲಿ ತಲ್ಲೀನರಾಗಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ನೈತಿಕತೆ ಹೊಂದಿಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ಗೊಂದಲ ನಿರ್ಮಾಣವಾದ್ರೆ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಬೇಡ. ಸರ್ವ ಪಕ್ಷ ಸರ್ಕಾರ ಜಾರಿಗೆ ಬರಬೇಕು. ಅಂತಹ ಪ್ರಯೋಗ ರಾಜ್ಯದಲ್ಲಿ ನಡೆಯಬೇಕು. ಇಂತಹ ಆದರ್ಶ ಮಂತ್ರಿ ಮಂಡಲ ರಚನೆಯಾಗಲಿ ಎಂದರು.
ವಿಪಕ್ಷ ಮುಕ್ತ ಸರ್ಕಾರ ಸರಿಯಲ್ಲ. ವಿಪಕ್ಷ ಇರಬೇಕು ಎಂಬುದು ನನ್ನ ವಾದವಾಗಿದೆ ಎಂದಿದ್ದಾರೆ. ಮೋದಿ ನೇತೃತ್ವದ ಸರ್ಕಾರದಿಂದ ಸಾಕಷ್ಟು ಕೆಲಸ ಆಗಿದೆ. ಕೇಂದ್ರ ಸರ್ಕಾರದ ಬಗ್ಗೆ ನಿರೀಕ್ಷೆ ಬಹಳ ಇತ್ತು. ನಿರೀಕ್ಷೆಯಷ್ಟು ಸಾಧನೆಗಳು ಆಗಲಿಲ್ಲ ಎಂಬ ಬೇಸರವಿದೆ.
ರಾಮ ಮಂದಿರಕ್ಕಿಂತ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ಗಂಗಾ ಶುದ್ಧೀಕರಣ ಸಂಪೂರ್ಣವಾಗಿ ಆಗಿಲ್ಲ ಎಂದು ಉಡುಪಿಯಲ್ಲಿ ಪೇಜಾವರ ಸ್ವಾಮೀಜಿ ಪರೋಕ್ಷವಾಗಿ ಮೋದಿ ಸರಕಾರಕ್ಕೆ ಟಾಂಗ್ ನೀಡಿದ್ದಾರೆ.