ಬೆಂಗಳೂರು(ಸೆ 14) : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದೆ. ಆದ್ರೆ ಇದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿವೆ. ಇವರ ಜೊತೆ ಕೈಜೋಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ
ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ.
ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ? ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹಿಂದಿ ದಿವಸ್ ವಿರುದ್ಧ ಬರೆದುಕೊಂಡಿದ್ದಾರೆ.