50 ಲಕ್ಷ ರೂ ಮೌಲ್ಯದ ಶೂ ಧರಿಸುವ ಸಿಎಂರದ್ದು ಯಾವ ಸಮಾಜವಾದ?: ಕುಮಾರಸ್ವಾಮಿ

Webdunia
ಶನಿವಾರ, 11 ನವೆಂಬರ್ 2017 (14:55 IST)
ಸಿಎಂ ಸಿದ್ದರಾಮಯ್ಯ ಸಮಾಜವಾದಿ ಹಿನ್ನೆಲೆಯಿಂದ ಬಂದವರೆಂದು ಹೇಳ್ತಾರೆ. ಆದರೆ, 50 ಲಕ್ಷ ರೂ ಮೌಲ್ಯದ ಶೂ ಧರಿಸುತ್ತಾರೆ. ಇದು ಢೋಂಗಿ ಸಮಾಜವಾದ ಅಲ್ಲವೇ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸರಕಾರ ಚೆಕ್‌ಪೋಸ್ಟ್‌ಗಳಲ್ಲಿ ಖಾಸಗಿ ಗೂಂಡಾಗಳನ್ನು ನೇಮಿಸಿ ಹಣ ಲೂಟಿ ಹೊಡೆಯುತ್ತಿದೆ. ಪ್ರತಿನಿತ್ಯ 20 ರಿಂದ 30 ಲಕ್ಷ ಹಣ ಸಂಗ್ರಹಿಸಲಾಗುತ್ತಿದೆ. ಜಿಎಸ್‌ಟಿ ಜಾರಿ ಬಂದ ಮೇಲೆ ಚೆಕ್‌‌ಪೋಸ್ಟ್‌ಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿದರು.
 
ವಿಪಕ್ಷಗಳನ್ನು ಟೀಕಿಸಲು ಸಿಎಂ ಸಿದ್ದರಾಮಯ್ಯ ಪದೇ ಪದೇ ಢೋಂಗಿ ಪದ ಬಳಸುತ್ತಾರೆ. ಢೋಂಗಿ ಪದ ಸಿಎಂಗೆ ತುಂಬಾ ಪ್ರಿಯವಾಗಿದೆ. ಆದರೆ, ನಿಮ್ಮದು ಢೋಂಗಿ ಸಮಾಜವಾದವಲ್ಲವೇ? ಎಂದು ಪ್ರಶ್ನಿಸಿದ್ದಾರೆ.
 
ರೌಡಿಗಳನ್ನು ಬಿಟ್ಟು ಸರಕಾರ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ. ಮುಂಬರುವ ಚುನಾವಣೆಗೆ ಹಣ ಸಂಗ್ರಹ ಮಾಡಲು ಸರಕಾರ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments