ಆತ್ಮಹತ್ಯೆಗೆ ಶರಣಾಗಿದ್ದ ರೈತ ಮೂರ್ತಿಯ ಮನೆಗೆ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಮೃತ ರೈತ ಕುಟುಂಬದ ಸದಸ್ಯರಿಗೆ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿ, ಅಗತ್ಯವಾದಲ್ಲಿ ಮತ್ತಷ್ಟು ನೆರವು ನೀಡುವುದಾಗಿ ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅದಿಕಾರಕ್ಕೆ ಬಂದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು. ರೈತರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರಕಾರಗಳು ರೈತರೊಂದಿಗೆ ಚೆಲ್ಲಾಟವಾಡುತ್ತಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ