ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ನಮಗೆ ಹೇಳಿದ್ದೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ನಮಗೆ ಹೇಳಿದ್ದೇ ಎಚ್.ಡಿ.ಕುಮಾರಸ್ವಾಮಿ. ಈ ಕುರಿತು ಯಾವುದೇ ದೇವಾಲಯದಲ್ಲಿ ಪ್ರಮಾಣ ಮಾಡಲು ಸಿದ್ಧ. ಬೇಕಿದ್ದರೆ ಎಚ್‌ಡಿಕೆ ಅವರೇ ದೇವಾಲಯ ನಿಗದಿಪಡಿಸಲಿ ಎಂದು ಸವಾಲ್ ಎಸೆದರು.
ರಾಜ್ಯಸಭೆ ಚುನಾವಣೆಯಲ್ಲಿ ನಾವು ತಪ್ಪು ಮಾಡಿಲ್ಲ. ನಾವು ತಪ್ಪು ಮಾಡಿದ್ದೇ ಆದ್ರೆ, ಶಾಸಕ ಗೋಪಾಲಯ್ಯ ಅವರಿಗೊಂದು ನ್ಯಾಯ ನಮಗೊಂದು ನ್ಯಾಯವೇ ನಮ್ಮನ್ನು ಬೇಡು ಎನ್ನುವುದರ ಹಿಂದಿರುವ ಉದ್ದೇಶವೇನು ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಪ್ರಶ್ನಿಸಿದ್ದಾರೆ.
ಜೆಡಿಎಸ್ ಪಕ್ಷದ ಐವರು ಬಂಡಾಯ ಶಾಸಕರಾದ ಜಮೀರ್ ಅಹ್ಮದ್, ಶ್ರೀನಿವಾಸ್, ಚೆಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಇಕ್ಬಾಲ್ ಅನ್ಸಾರಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂರನೇಯ ಅಭ್ಯರ್ಥಿ ಬೆಂಬಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ