Select Your Language

Notifications

webdunia
webdunia
webdunia
webdunia

ಮೋದಿ ಆಗಮನಕ್ಕೆ ಕುಂದಾನಗರಿ ಸಜ್ಜು

ಮೋದಿ ಆಗಮನಕ್ಕೆ ಕುಂದಾನಗರಿ ಸಜ್ಜು
ಇಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ನಡೆಸಿದ್ದಾರೆ. ಇಲ್ಲಿನ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಕುಂದಾನಗರಿ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಳಗಾವಿಯಲ್ಲಿಂದು ಮೋದಿ ಮೆಗಾ ರೋಡ್​ ಶೋ ನಡೆಸಲಿದ್ದು, ಭರ್ಜರಿ ಮತ ಬೇಟೆಗೂ ತಯಾರಿ ನಡೆಸಲಾಗಿದೆ.. ಸುಮಾರು 10.7 ಕಿಲೋ ಮೀಟರ್​​ ರೋಡ್​ ಶೋ ನಡೆಸಲಿರುವ ಮೋದಿ, ಆನಂತರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.. ಈ ರೋಡ್​​​ ಶೋ ದೇಶದ ಅತಿ ಉದ್ದದ ರೋಡ್ ಶೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. ರೋಡ್ ಶೋ ಮಾರ್ಗ, ಸಮಾವೇಶ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರೋಡ್ ಶೋಗೆ ಮೂವರು SPಗಳ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 1,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಸ್ವಾಗತಕ್ಕೆ 10 ಕ್ವಿಂಟಾಲ್​ ಹೂ ರೆಡಿ