Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮದ್ಯದ ಅಮಲಿನಲ್ಲಿ ಕೂಲಿ ಕಾರ್ಮಿಕರು ದೊಣ್ಣೆಗಳನ್ನು ಹಿಡಿದುಕೊಂಡು ದಾಂದಲೆ ನಡೆಸಿ ಸ್ಥಳೀಯರಲ್ಲಿ ಆತಂಕ ಮೂಡಿದ ಘಟನೆ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ.
ದೇವನಹಳ್ಳಿ ತಾಲೂಕಿನ ಚಿಕ್ಕಸಣ್ಣೆಗೇಟ್ ಬಳಿ 20ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಮದ್ಯ ಸೇವನೆ ಮಾಡಿ ದೊಣ್ಣೆಗಳಿಂದ ಹಿಡಿದುಕೊಂಡು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.
ಇವರನ್ನು ಬಿಡಿಸಲು ಹೋದ ಸ್ಥಳಿಯರ ಮೇಲೆ ಕಾರ್ಮಿಕರು ದಾಂದಲೆ ನಡೆಸಿ ಅಟ್ಟಹಾಸ ಮೆರೆದಿದ್ದು, ವೈನ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಸೂಪರ್ ವೈಸರ್ಗಳ ಮೇಲೂ ಹಲ್ಲೆ ನಡೆಸಲಾಗಿದೆ. ಪರಿಣಾಮವಾಗಿ ಇಬ್ಬರು ಸೂಪರ್ ವೈಸರ್ಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೂಲಿ ಕಾರ್ಮಿಕರ ಈ ಕಿತ್ತಾಟದ ದೃಶ್ಯಾವಳಿಗಳನ್ನು ಮೊಬೈಲ್ ಕ್ಯಾಮಾರದಲ್ಲಿ ಸೆರೆಹಿಡಿಯಲಾಗಿದೆ.
ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ವಿಡಿಯೋ ಆಧರಿಸಿ ಕೂಲಿ ಕಾರ್ಮಿಕರನ್ನು ಬಂಧಿಸಲಾಗಿದೆ ...!!