ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಈ ಯೋಜನೆಯ ಅಂಗವಾಗಿ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 2,000 ರೂ. ಜಮೆ ಮಾಡಲಾಗುತ್ತದೆ. ಆದರೆ ಕಳೆದ ಎರಡು ತಿಂಗಳಿನಿಂದ ಹಣ ಬಂದಿಲ್ಲ. ಅದಕ್ಕೀಗ ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಜೂನ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಹಣದ ಕಂತು ಮನೆ ಯಜಮಾನಿಯ ಖಾತೆಗೆ ಜಮೆ ಆಗಿತ್ತು. ಆದರೆ ಅದಾದ ಬಳಿಕ ಎರಡು ತಿಂಗಳಿನಿಂದ ಹಣ ಬಂದಿಲ್ಲ. ಈ ಬಗ್ಗೆ ಸಾಕಷ್ಟು ಟೀಕೆಗಳೂ ಕೇಳಿಬಂದಿದ್ದವು. ಕಾಂಗ್ರೆಸ್ ಬಳಿ ಗ್ಯಾರಂಟಿ ಯೋಜನೆಗಳಿಗೆ ಬೊಕ್ಕಸದಲ್ಲಿ ದುಡ್ಡಿಲ್ಲ ಎಂದು ಆರೋಪ ಕೇಳಿಬರುತ್ತಿದೆ.
ಈ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಯಾವಾಗ ಖಾತೆಗೆ ಬರುತ್ತದೆ ಎಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಹಣ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಒಂದು ವಾರದಲ್ಲಿ ಜುಲೈ ತಿಂಗಳ ಹಣ ಜಮೆ ಆಗುತ್ತದೆ. ಅಕ್ಟೋಬರ್ ತಿಂಗಳಲ್ಲಿ ಸೆಪ್ಟೆಂಬರ್ ಹಣ ಜಮೆ ಆಗಲಿದೆ. ಅದೇ ರೀತಿ ಈ ತಿಂಗಳ ಹಣ ಮುಂದಿನ ತಿಂಗಳು ಜಮೆ ಆಗಲಿದೆ ಎಂದು ಸಚಿವರು ಹೇಳಿದ್ದಾರೆ.
ಬಿಜೆಪಿಯವರು ಗ್ಯಾರಂಟಿ ಘೋಷಣೆ ಮಾಡಿದಾಗ ಇದೆಲ್ಲಾ ಆಗೋ ಕೆಲಸವಲ್ಲ ಎಂದು ಕುಹುಕ ಮಾಡಿದ್ದರು. ಆಡಿಕೊಳ್ಳುವವರಿಗೇನು ಆಡಿಕೊಳ್ಳುತ್ತಾರೆ. ಈಗ ಗ್ಯಾರಂಟಿ ಕೊಡಲು ಪ್ರಾರಂಭಿಸಿದ ಮೇಲೆ ಅಪಪ್ರಪಚಾರ ಮಾಡುತ್ತಿದ್ದಾರೆ. ಅವರು ಹೇಳಿಕೊಳ್ಳಲಿ, ನಾವು ನಮ್ಮ ಕೆಲಸ ಮಾಡುತ್ತಿರಬೇಕಷ್ಟೇ ಎಂದು ಲಕ್್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.