Publish Date: Wednesday, 21 December 2022 (07:40 IST)
Updated Date: Wednesday, 21 December 2022 (01:42 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸಿಬಿಐ ದಾಳಿ ಸರ್ವೆ ಸಾಮಾನ್ಯ, ಡಿ.ಕೆ ಶಿವಕುಮಾರ್ ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇತ್ತಿಚೀನ ದಿನಗಳಲ್ಲಿ ಸಿಬಿಐ ದಾಳಿ ಸರ್ವೇ ಸಾಮಾನ್ಯವಾಗಿದೆ.
ವಿರೋಧ ಪಕ್ಷಗಳ ಮೇಲೆ ಸಿಬಿಐ, ಇ.ಡಿ, ಐಟಿ ದಾಳಿ ಮಾಡ್ತಾ ಇರೋದು ದೇಶದಲ್ಲಿ ಹಾಗೂ ರಾಜ್ಯದಲ್ಲಿ ಜಗಜ್ಜಾಹೀರಾಗಿದೆ. ಅದರಲ್ಲಿ ಹೊಸದೇನು ಇಲ್ಲ. ಡಿ.ಕೆ ಶಿವಕುಮಾರ್ ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಹೇಳಿದ್ದಾರೆ.