ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ಬಾಗ್ ಸಜ್ಜಾಗುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಜಗಜ್ಯೋತಿ ಬಸವೇಶ್ವರ ಅವರ ಹೂವಿನ ಪ್ರತಿಕೃತಿ ಪ್ರಮುಖ ಆಕರ್ಷಣೆಯಾಗಲಿದೆ. 11 ದಿನಗಳ ಫಲಪುಷ್ಪ ಪ್ರದರ್ಶನವು ಜನವರಿ 18 ರಂದು ಉದ್ಘಾಟನೆಗೊಳ್ಳಲಿದ್ದು ಜನವರಿ 28 ರಂದು ಮುಕ್ತಾಯಗೊಳ್ಳಲಿದೆ.
ತೋಟಗಾರಿಕಾ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಮತ್ತು ಲಾಲ್‌ಬಾಗ್ ನಿರ್ದೇಶಕ ಡಿಎಸ್ ರಮೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫಲಪುಷ್ಟ ಪ್ರದರ್ಶನದಲ್ಲಿ ಜಗಜ್ಯೋತಿ ಬಸವೇಶ್ವರ ವಚನ ಸಾಹಿತ್ಯವನ್ನು ಜನರಿಗೆ ತಿಳಿಸಲು ನಿರ್ಧರಿಸಲಾಗಿದೆ. ಈ ಬಾರಿ ಬಸವಣ್ಣನವರು ಮತ್ತು ಅವರ ವಚನ ಸಾಹಿತ್ಯ ವಿಷಯ ಆಧರಿಸಿ ಹೂವಿನ ಮಾದರಿಗಳನ್ನು ರಚಿಸಲಾಗುತ್ತಿದೆ ಎನ್ನಲಾಗಿದೆ.