Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಗಳು ನೆಲ ಸಮವಾದ ಘಟನೆ ಇಂದು ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಜೆಸಿಬಿ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚಾರಣೆಯಲ್ಲಿ ತೊಡಗಿದ್ದಾರೆ. ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ ಎನ್ನಲಾಗಿದೆ. ಇದು ಹಳ್ಳ ದಿಣ್ಣೆಗಳಿಂದ ಕೂಡಿದ ಪ್ರದೇಶವಾಗಿದ್ದು, ಸಹಜವಾಗಿಯೇ ವಿಪರೀತ ಮಳೆಗೆ ಗುಡ್ಡ ಕುಸಿತವಾಗಿದೆ. ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.