Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಭಾರೀ ಮಳೆಗೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ

ಭಾರೀ ಮಳೆಗೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ
ಬೆಳಗಾವಿ , ಮಂಗಳವಾರ, 6 ಆಗಸ್ಟ್ 2019 (10:00 IST)
ಬೆಳಗಾವಿ : ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಬಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರವನ್ನು ಸಂಪರ್ಕಿಸುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭೂ ಕುಸಿತ ಉಂಟಾಗಿದೆ.




ಈ ಭೂ ಕುಸಿತದಿಂದ  ಪುಣೆ-ಬೆಂಗಳೂರು ರಸ್ತೆ ಸಂಪರ್ಕ ಕಡಿತವಾಗಿದೆ. ಆದಕಾರಣ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು,  ಇಂದು ಮಧ್ಯಾಹ್ನದವರೆಗೂ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.


ಈ ಹಿನ್ನಲೆಯಲ್ಲಿ ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದ್ದಾರೆ. ಈಗಾಗಲೇ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ವಾಹನಗಳು ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಂತಿದ್ದಾವೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

370 ನೇ ವಿಧಿ ರದ್ದುಗೊಳಿಸಿದ ಕೇಂದ್ರದ ನಿರ್ಧಾರಕ್ಕೆ ಪಾಕಿಸ್ತಾನ ಹೇಳಿದ್ದೇನು?