ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡು ಶಾಸಕ ಸ್ಥಾನದಿಂದ ಅನರ್ಹಗೊಂಡಿರೋ ಮುಖಂಡರು ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮಹೇಶ್ ಕುಮಠಳ್ಳಿ ಹಾಗೂ ಪಕ್ಷೇತರ ಶಾಸಕ ಆರ್.ಶಂಕರ್ ಅವರು ಸ್ಪೀಕರ್ ನೀಡಿರೋ ಅನರ್ಹತೆ ಆದೇಶದ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಸ್ಪೀಕರ್ ರಮೇಶ್ ಕುಮಾರ ಅಂಗೀಕಾರ ಮಾಡಬೇಕಿತ್ತು. ಆದರೆ ಅನರ್ಹಗೊಳಿಸಿ ಆದೇಶ ನೀಡಿದ್ದು, ಸ್ಪೀಕರ್ ನಿರ್ಧಾರಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ.
ಮೈತ್ರಿ ಸರಕಾರ ಪತನಕ್ಕೆ ಕಾರಣವಾದ ಶಾಸಕರ ವಿರುದ್ಧ ಸ್ಪೀಕರ್ ಸಿದ್ದರಾಮಯ್ಯ ದೂರು ನೀಡಿದ್ದರು. ವಿಪ್ ಉಲ್ಲಂಘಿಸಿದ ಕಾರಣ ಶಾಸಕರನ್ನ ಅನರ್ಹಗೊಳಿಸಿ ಸ್ಪೀಕರ್ ತೀರ್ಪು ನೀಡಿದ್ರು.