Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದ ಬೇರೆ ಬೇರೆ ಪಕ್ಷಗಳ ರಾಜಕೀಯ ಮುಖಂಡರ ಮಕ್ಕಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ವರುಣಾದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮುನ್ನಡೆಯಲ್ಲಿದ್ದಾರೆ. ಜೇವರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಪುತ್ರ ಅಜಯ್ ಸಿಂಗ್, ಚಿತ್ತಾಪುರದಲ್ಲಿ ಪ್ರಿಯಾಂಕ ಖರ್ಗೆ ಮುನ್ನಡೆಯಲ್ಲಿದ್ದಾರೆ.
ಆದರೆ ಜೆಎಸ್ ಪಟೇಲ್ ಪುತ್ರ ಮಹಿಮಾ ಪಟೇಲ್ ಹಿನ್ನಡೆಯಲ್ಲಿದ್ದಾರೆ. ಸೊರಬದಲ್ಲಿ ಬಂಗಾರಪ್ಪನವರ ಪುತ್ರರಾದ ಜೆಡಿಎಸ್ ನ ಮಧುಬಂಗಾರಪ್ಪ ಮುನ್ನಡೆಯಲ್ಲಿದ್ದರೆ, ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕುಮಾರ್ ಬಂಗಾರಪ್ಪ ಹಿನ್ನಡೆಯಲ್ಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.