Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

1ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ಪ್ರಥಮ ಭಾಷೆಯಾಗಿ ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯ

1ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ಪ್ರಥಮ ಭಾಷೆಯಾಗಿ ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯ
bangalore , ಮಂಗಳವಾರ, 12 ಜುಲೈ 2022 (20:43 IST)
ಕರ್ನಾಟಕದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ 1ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ಪ್ರಥಮ ಭಾಷೆಯಾಗಿ ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯಗೊಳಿಸಬೇಕು. ದ್ವಿತೀಯ ಭಾಷೆಯಾಗಿ ಇಂಗ್ಲಿಷ್ ಮತ್ತು ತೃತೀಯ ಭಾಷೆಯಾಗಿ ಭಾರತದ ಯಾವುದಾದರೊಂದು ಭಾಷೆಯನ್ನು ಕಲಿಸಬೇಕು. ಈ ವೇಳೆ 3ನೇ ಭಾಷೆಯಾಗಿ ಸಂಸ್ಕೃತಕ್ಕೆ ಆದ್ಯತೆ ನೀಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಈ ಅಂಶಗಳು ಅವಕಾಶ ಪಡೆಯಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ, ‘ರಾಷ್ಟ್ರೀಯ ಶಿಕ್ಷಣ ನೀತಿಗೆ ಯಾವ್ಯಾವ ಅಂಶ ಅಳವಡಿಸಿಕೊಳ್ಳಬೇಕು?’ ಎಂಬ ಬಗ್ಗೆ ಪ್ರಸ್ತಾವ ಸಿದ್ಧಪಡಿಸಲು ರಾಜ್ಯ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಮದನ್ಗೋಪಾಲ್ ಅವರ ನೇತೃತ್ವದ ಕಾರ್ಯಪಡೆ ರಚಿಸಿತ್ತು. ಈ ಕಾರ್ಯಪಡೆಯು 26 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಮಿತಿ ರಚಿಸಿ ಆ ಸಮಿತಿಗಳಿಂದ ವರದಿ ಪಡೆದಿತ್ತು. ಅದನ್ನು ಆಧರಿಸಿ ತಾನು ಸಿದ್ಧಪಡಿಸಿದ ವರದಿಯನ್ನು ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಕಾರ್ಯಪಡೆ ಸಲ್ಲಿಸಿತ್ತು. ರಾಜ್ಯ ಸರ್ಕಾರ ಈ ವರದಿಯನ್ನು ಒಪ್ಪಿ ಕೇಂದ್ರಕ್ಕೆ ರವಾನಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತಾರಣೆ