ಕಬ್ಬು ಕಟಾವು ಮಾಡುವಾಗ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳನ್ನು ನೋಡಿರೋ ರೈತರು ಬೆಚ್ಚಿ ಬಿದ್ದಿದ್ದಾರೆ.
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡುಬಂದಿವೆ.
ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿವೆ. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು, ಈ ಗ್ರಾಮದ ರೈತರ ಆತಂಕಕ್ಕೆ ಕಾರಣವಾಗಿದೆ.
ಚಿರತೆ ಬಂಧಿಸಲು ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಕಿಕ್ಕೇರಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶಿವಮಂಜು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಮರಿಗಳನ್ನು ನೋಡಲು ಮುಗಿಬಿದ್ದಿದ್ದ ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.