Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬಳಿಕ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎಸ್.ಈಶ್ವರಪ್ಪ ಪರ ಮಂತ್ರಿಗಿರಿಯ ಕೂಗು ಜೋರಾಗಿಯೇ ಕೇಳಿ ಬರ್ತಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಮತ್ತೆ ಮಂತ್ರಿಯಾಗಲಿ.
ಚಳಿಗಾಲದ ಅಧಿವೇಶನಕ್ಕೂ ಮುನ್ನ ಮತ್ತೆ ಸಚಿವರಾಗಲಿ ಎಂದು ಶಿವಮೊಗ್ಗ ನಗರದ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಈಶ್ವರಪ್ಪ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ.ವಿಶೇಷ ಪೂಜೆ ನೆರವೇರಿಸುವುದರ ಮೂಲಕ ದೇವರ ಮೊರೆ ಹೋಗಿದ್ದಾರೆ.. ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ಸಹ ರಾಜೀನಾಮೆ ನೀಡಿದ್ದರು. ಇದೀಗ ಈಶ್ವರಪ್ಪ ಆರೋಪದಿಂದ ಮುಕ್ತರಾಗಿದ್ದು, ಈಗ ಮತ್ತೆ ಮಂತ್ರಿ ಸ್ಥಾನ ಸಿಗಲಿ ಎಂದು ಅಭಿಮಾನಿಗಳು ದೇವರಲ್ಲಿ ಮೊರೆ ಹೋಗಿದ್ದಾರೆ.