ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ತಾಕತ್ತಿದ್ರೆ ಹಿಂದೆ ಷಡ್ಯಂತ್ರ ರೂಪಿಸದೆ ನೇರವಾಗಿ ಚರ್ಚೆಗೆ ಬರಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಹ್ವಾನ ನೀಡಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿವೆ. ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದರೂ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿವೆ. ರೈತರ ಕಣ್ಣೀರು ಒರೆಸುವಲ್ಲಿ ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಾದ್ಯಂತ ಒಂದು ಸುತ್ತಿನ ಪ್ರವಾಸ ಮುಕ್ತಾಯಗೊಳಿಸಿದ್ದು, ಜನತೆ ರಾಷ್ಟ್ರೀಯ ಪಕ್ಷಗಳನ್ನು ದೂರವಿಡಲು ನಿರ್ಧರಿಸಿದ್ದಾರೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಣೆ ಹಾಕಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ವಿಧಾನಸಭೆ ಚುನಾವಣೆ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ನಡೆಯುವ ಸಾಧ್ಯತೆಗಳಿವೆ. ಆದಾಗ್ಯೂ ಜೆಡಿಎಸ್ ಎಲ್ಲಾ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.