ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪ್ರಣಾಳಿಕೆ ಏನೇ ಇರಲಿ, ಕೊಟ್ಟ ಸಾಲಮನ್ನಾ ಮಾತು ಉಳಿಸಿಕೊಳ್ಳಲಿ. ಇಲ್ಲದಿದ್ದರೆ ಕುರ್ಚಿಯಿಂದ ಕೆಳಗಿಳಿಯಲಿ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಸಿಎಂ ಕುಮಾರಸ್ವಾಮಿ ಅವರು ಸಾಲ ಮನ್ನಾ ವಿಚಾರವಾಗಿ ಯೂಟರ್ನ್ ಹೊಡೆದಿದ್ದಾರೆ. ಪೂರ್ಣ ಬಹುಮತ ಇಲ್ಲ. ಹಾಗಾಗಿ ಸಾಲಮನ್ನಾ ಸಾಧ್ಯವಿಲ್ಲ ಎಂದಿದ್ದಾರೆ. ಸಿಎಂ ಕುಮಾರಸ್ವಾಮಿ ಅವರಿಗೆ ಬದ್ಧತೆ ಇರಬೇಕು. ಮೊದಲು ರೈತರ ಸಾಲ ಮನ್ನಾ ಮಾಡಿ’ ಎಂದು ಹೇಳಿದ್ದಾರೆ.
ಹಾಗೇ ’ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ತೃತೀಯ ರಂಗ ರಚನೆಗೆ ಅಷ್ಟೊಂದು ನಾಯಕರು ಬಂದಿದ್ದು, ಅದು ಕಾಂಗ್ರೆಸ್ ನ ಅವನತಿಯ ಮೊದಲ ಮೆಟ್ಟಿಲು. ತೃತೀಯ ರಂಗದಲ್ಲಿ ಕಾಂಗ್ರೆಸ್ ಅನ್ನು ಸೇರಿಸಿಕೊಳ್ಳುವುದಿಲ್ಲ. ತೃತೀಯ ಪಕ್ಷಗಳು ಅಣಬೆಗಳಿದ್ದಂತೆ. ಚುನಾವಣೆ ಸಮಯದಲ್ಲಿ ಮಾತ್ರ ಇವರು ಒಂದಾಗುತ್ತಾರೆ. ಚುನಾವಣೆ ಮುಗಿದ ಬಳಿಕ ಕಾಣುವುದಿಲ್ಲ. ಇಂಥ ಪಕ್ಷಗಳು ಸ್ವಾರ್ಥಕ್ಕಾಗಿ ರಾಜಕೀಯ ಮಾಡುತ್ತೀವೆ’ ಎಂದು ಶ್ರೀರಾಮುಲು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ