Publish Date: Wed, 23 Nov 2022 (19:58 IST)
Updated Date: Wed, 23 Nov 2022 (20:02 IST)
ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 24 ಘಂಟೆಗಳು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮತ್ತು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡು ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನ. 25ರ ಬೆಳಗ್ಗೆವರೆಗೆ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ ಇದೆ. ಜತೆಗೆ, ಮುಂದಿನ 24 ಗಂಟೆಗಳವರೆಗೂ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ.