Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾಂಗ್ರೆಸ್ನವರು ಲಿಂಗಾಯತ ವಿವಾದ ತೆಗೆದಿದ್ದೇ ಒಳ್ಳೇದಾಯ್ತು, ಇದು ಬಿಜೆಪಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗುತ್ತವೆ.. ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ. ನನ್ನ ಮಾತನ್ನು ತಿರುಚಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳುತ್ತಾರೆ.. ಮಾಧ್ಯಮದಲ್ಲೇ ಸಿದ್ದರಾಮಯ್ಯ ಸ್ಪಷ್ಟವಾಗಿ ಲಿಂಗಾಯತರ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ರು. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಹೋಗಿರೋದು ಬಿಜೆಪಿಗೆ ಖಂಡಿತ ಪ್ಲಸ್ ಆಗುತ್ತೆ ಎಂದು ತಿಳಿಸಿದ್ರು.