Publish Date: Mon, 10 Apr 2023 (15:41 IST)
Updated Date: Mon, 10 Apr 2023 (15:50 IST)
ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಸಂಸದ B.Y. ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, 24 ಗಂಟೆಯಲ್ಲಿ ಪಕ್ಷದ ಅಭ್ಯರ್ಥಿಗಳ ಘೋಷಣೆ ಆಗುತ್ತೆ.. ದೆಹಲಿಯಲ್ಲಿ ಈಗಾಗಲೇ ಮೂರು ಚುನಾವಣಾ ಸಮಿತಿ ಸಭೆ ನಡೆದಿದೆ, 24 ಗಂಟೆಯೊಳಗೆ ಪಟ್ಟಿ ಬಿಡುಗಡೆಯಾಗುತ್ತದೆ ಎಂದಿದ್ದಾರೆ.. ಇನ್ನು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ.. ವಿರೋಧ ಪಕ್ಷಗಳಿಗೆ ಪ್ರಚಾರಕ್ಕೆ ಯಾವುದೇ ವಿಷಯವಿಲ್ಲ ಎಂದು ಕುಟುಕಿದ್ರು.. ಕಾಂಗ್ರೆಸ್ನವರಿಗೆ ಅಪಪ್ರಚಾರ ಮಾಡುವುದೇ ಉದ್ದೇಶ.. ಇಟಲಿ ದೇಶದ ಗ್ಲಾಸ್ ಹಾಕಿಕೊಂಡು ನೋಡುವ ಪ್ರವೃತ್ತಿ ಇದೆ.. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ನೋಡಲು ಅವರಿಗೆ ಆಗುತ್ತಿಲ್ಲ.. ಒಳ್ಳೆಯ ಕೆಲಸ ಮಾಡದಿದ್ದರೂ ಪರವಾಗಿಲ್ಲ. ಒಳ್ಳೆಯ ಕೆಲಸ ಮಾಡುವವರ ಟೀಕೆ ಮಾಡುವುದನ್ನು ನಿಲ್ಲಿಸಲಿ ಎಂದು ವಾಗ್ದಾಳಿ ನಡೆಸಿದ್ರು.