ಕೊರೊನಾ ವೈರಸ್ ನಿಯಂತ್ರಣಕ್ಕೆ ಈ ಜಿಲ್ಲೆಯಲ್ಲಿ ಜುಲೈ 16 ರಿಂದ ಒಂದು ವಾರ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರಿಂದ ಒಂದು ವಾರದವರೆಗೆ ಲಾಕ್ಡೌನ್ ಜಾರಿ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಜನಪ್ರತಿನಿಧಿಗಳು, ಸಮಾಜದ ಗಣ್ಯರು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರಿಗೆ ಅವರು ಈ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟಲು ಲಾಕ್ಡೌನ್ ನ ಅನಿವಾರ್ಯತೆ ಇರುವುದಾಗಿ ಅಭಿಪ್ರಾಯವ್ಯಕ್ತವಾಗಿದೆ.
ಸಾವ೯ಜನಿಕರು ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಎರಡು ದಿನಗಳಲ್ಲಿ ಸಂಗ್ರಹಿಸಿ ಇಟ್ಟುಕೊಂಡು ಲಾಕ್ಡೌನ್ ಅವಧಿಯಲ್ಲಿ ಜಿಲ್ಲಾಡಳಿತದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.