ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಈ ವಾರದ ಲಾಕ್ ಡೌನ್ ನಿಂದ ವಿನಾಯ್ತಿ ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.
ಸಂಪೂರ್ಣ ಲಾಕ್ ಡೌನ್ ಬದಲಾಗಿ ಕೆಲವೊಂದಕ್ಕೆ ವಿನಾಯ್ತಿ ಅಥವಾ ಓಡಾಡುವ ಅವಧಿ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ನಗರದಲ್ಲಿ ಸದ್ಯಕ್ಕೆ ಶೇ.6 ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿದೆ.
ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದರೆ ಅನ್ ಲಾಕ್ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು. ಅದರಂತೆ ಬಿಎಂಟಿಸಿ, ಓಲಾ, ಉಬರ್ ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಈ ಬಗ್ಗೆ ಇಂದು ಮಹತ್ವದ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.