Publish Date: Mon, 27 Apr 2020 (14:50 IST)
Updated Date: Mon, 27 Apr 2020 (14:51 IST)
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರಾಜ್ಯಗಳ ಸಿಎಂ ಗಳ ಜೊತೆ ಕೊರೊನಾ ವೈರಸ್ ಸ್ಥಿತಿಗತಿ ಬಗ್ಗೆ ವಿಚಾರಿಸಿದ್ದಾರೆ.
ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಮೇ 15 ರವರೆಗೆ ಲಾಕ್ ಡೌನ್ ಮುಂದುವರಿಸಬೇಕೆಂದು ಪ್ರಸ್ತಾಪ ಇಟ್ಟಿದ್ದಾರೆ ಅಂತ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೇರೆ ರಾಜ್ಯಗಳ ಜೊತೆ ತುಲನೆ ಮಾಡಿದರೆ ನಮ್ಮ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಹೆಚ್ಚದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ ಎಂದಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಯಾವುದೇ ಸೋಂಕಿತರು ಸಿಕ್ಕಿಲ್ಲ. ಜಾಗೃತಿ ವಹಿಸಬೇಕಿದೆ. ಕೊರೊನಾಗೆ ಮದ್ದಿಲ್ಲ. ಇದಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಮದ್ದು. ಒಂದೆರಡು ದಿನದಲ್ಲಿ ಕಡಿಮೆಯಾಗುವ ರೋಗವಲ್ಲ. ಸುಮಾರು ದಿನ ಮುಂದುವರಿಯಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.