Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯದಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ, ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾತ್ರಿ ಕಫ್ರ್ಯೂವನ್ನು ಜಾರಿಗೊಳಿಸಲಾಗುತ್ತಿದೆ.
ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಯಲಿದೆ. ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು ಎಂದು ಸಚಿವ ಆರಗ ಜ್ಞಾನೇಂದ್ರ ಖಡಕ್ಕಾಗಿ ಸೂಚನೆ ನೀಡಿದ್ದಾರೆ.